Kannada NewsKarnataka NewsLatest
*BREAKING: ಕನ್ನಡ ರಾಜ್ಯೋತ್ಸವದ ದಿನದಂದೇ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಹೋರಾಟಗಾರರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಇದೇ ವೇಳೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಜೋರಾಗಿದೆ. ರಾಜ್ಯೋತ್ಸವದ ದಿನದಂದೇ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತ್ಯೇಕ ರಾಜ್ಯಕ್ಕಾಗಿ ಪ್ರತ್ಯೇಕ ಧ್ವಜಾರೋಹಣ ನೆರವೇರಿಸಲು ಹೋರಾಟಗಾರರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹೋರಾಟಗಾರರನ್ನು ತಡೆದಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ 20ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


