
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ (80) ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ ಅವರು ಕಳೆದ ಒಂದು ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಆರೋಗ್ಯ ಸ್ಥಿತಿ ಉಲ್ಬಣಿಸಿದ ಕಾರಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಮೃತರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
ಮೇಟಿಯವರು ಜನತಾ ಪರಿವಾರದಿಂದ ಬೆಳೆದು ಬಂದ ರಾಜಕಾರಣಿ. ಗುಳೇದಗುಡ್ಡ ಕ್ಷೇತ್ರದಿಂದ ಎರಡು ಬಾರಿ, ಬಾಗಲಕೋಟೆ ಕ್ಷೇತ್ರದಿಂದ ಎರಡು ಬಾರಿ ಶಾಸಕರಾದವರು. ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು.



