Kannada NewsKarnataka NewsLatest
*ಡಿಸಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸರ್ಕಾರ ಭೂಸ್ವಾಧೀನ ಮಾಡಿಕೊಂಡಿದ್ದ ಜಮೀನಿಗೆ ಪರಿಹಾರ ನೀಡುವಂತೆ ಹಲವು ಬಾರಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಪರಿಹಾರಕ್ಕಾಗಿ ಡಿಸಿ ಕಚೇರಿಗೆ ಅಲೆದು ಅಲೆದು ಬೇಸತ್ತಿದ್ದ ರೈತ ಮಂಡ್ಯ ಡಿಸಿ ಕಚೇರಿ ಮುಂಭಾಗದ ಉದ್ಯಾನವನದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಗಂಭೀರವಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ದೇಹದ ಶೇ.60ರಷ್ಟು ಭಾಗ ಸುಟ್ತಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ ಎಂ.ಡಿ (55) ಮೃತ ರೈತ.



