Belagavi NewsBelgaum NewsKarnataka NewsLatest
*ಬೆಳಗಾವಿ ತೀವ್ರಸ್ವರೂಪ ಪಡೆದ ರೈತರ ಪ್ರತಿಭಟನೆ: ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿಯ ಗುರ್ಲಾಪುರದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ.
ಧರಣಿಯಲ್ಲಿ ಪಾಲ್ಗೊಂಡಿರುವ ನೂರಾರು ರೈತರು ಅರೆಬೆತ್ತಲೆ ಹೋರಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದೇ ಕಬ್ಬಿಗೆ ದರ ನಿಗದಿ ಮಾಡಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇಲ್ಲವಾದಲ್ಲಿ ಪ್ರತಿಭಟನೆ ಇನ್ನಷ್ಟು ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಕಿಡಿಕಾರಿದ್ದಾರೆ.




