Kannada NewsKarnataka NewsLatestPolitics

*ರೈತನ ಸಾವಿಗೆ ಸರ್ಕಾರವೇ ಕಾರಣ: ಆರ್.ಅಶೋಕ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಕ್ಕೆ ಸರ್ಕಾರವೇ ನೇರ ಕಾರಣ. ಇನ್ನೂ ಎಷ್ಟು ರೈತರು ಸಾಯಬೇಕೆಂದು ಸರ್ಕಾರ ಬಯಸುತ್ತಿದೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಎರಡು ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರ ನಮ್ಮ ಪರವಾಗಿಲ್ಲ, ಬೆಳೆ ಹಾನಿಗೆ ಪರಿಹಾರ ಸಿಗಲ್ಲ, ನೀರಾವರಿ ಸೌಲಭ್ಯ ಸಿಗುವುದಿಲ್ಲ ಎಂಬ ಭಾವನೆ ರೈತರಲ್ಲಿ ಬಂದಿದೆ. ಎಲ್ಲ ಇಲಾಖೆಗಳ ಅನುದಾನದಲ್ಲಿ ದೊಡ್ಡ ಮಟ್ಟದ ಕಡಿತವಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಚಿನ್ನಾಭರಣ ಅಡಮಾನ ಇಟ್ಟು 11 ಲಕ್ಷ ರೂ. ಸಾಲ ಮಾಡಿದ್ದಾರೆ. ಉಳುಮೆ ಮಾಡಲು ಹೊರಟರೆ ಅರಣ್ಯಾಧಿಕಾರಿಗಳು ತಡೆದಿದ್ದಾರೆ. ಇಂತಹ ಘಟನೆ ನಡೆದರೂ ಸರ್ಕಾರ ನೆರವಿಗೆ ಬಂದಿಲ್ಲ ಎಂದರು.

ಈ ಸಾವಿಗೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಸಿಎಂ ಕುರ್ಚಿಯ ಮ್ಯೂಸಿಕಲ್‌ ಚೇರ್‌ ಆಡಿಕೊಂಡು ಜನರ ಬದುಕನ್ನು ಬೀದಿಗೆ ತಂದಿದ್ದಾರೆ. ಇನ್ನೂ ಎಷ್ಟು ರೈತರ ಸಾವಿಗೆ ಈ ಸರ್ಕಾರ ಕಾಯುತ್ತಿದೆ? ಎಂದು ಪ್ರಶ್ನಿಸಿದರು.

Home add -Advt

ಚಾಮರಾಜನಗರದಲ್ಲಿ ಕೆರೆ ನೀರು ತುಂಬಿಸುವ ಕೆಲಸ ಬಿಜೆಪಿಯಿಂದ ನಡೆದಿತ್ತು. ಎರಡು ವರ್ಷಗಳಿಂದ ಅಲ್ಲಿ ನೀರಾವರಿ ವ್ಯವಸ್ಥೆ ಮಾಡಿಲ್ಲ. ವನ್ಯಜೀವಿಗಳು ಸ್ಥಳೀಯರ ಮೇಲೆ ದಾಳಿ ಮಾಡುತ್ತಿವೆ. ಯಾವ ಇಲಾಖೆಗಳೂ ಜನರಿಗೆ ಅನುಕೂಲ ಮಾಡಿಕೊಟ್ಟಿಲ್ಲ ಎಂದರು.

ರಾಹುಲ್‌ ಗಾಂಧಿ ಅವರಿಗೆ ಗೆಲ್ಲುವ ಯೋಗ್ಯತೆ ಇಲ್ಲ. ಆದ್ದರಿಂದ ಅವರು ನೆಲ ಡೊಂಕು ಎಂದು ಹೇಳುತ್ತಿದ್ದಾರೆ. ಮತಯಂತ್ರವನ್ನು ಅವರೇ ಪರಿಚಯಿಸಿ ಈಗ ಅವರೇ ವಿರೋಧಿಸುತ್ತಿದ್ದಾರೆ. ಮತ ಕಳ್ಳತನವಾಗಿದ್ದರೆ ಕಾಂಗ್ರೆಸ್‌ಗೆ 136 ಸೀಟುಗಳು ಹೇಗೆ ಬಂತು? ಮಾಲೂರಿನಲ್ಲಿ ಮತ ಕಳ್ಳತನ ಆಗಿದೆ ಎಂದು ಎಲ್ಲರಿಗೂ ಗೊತ್ತಾಗಿದೆ. ರಾಜ್ಯ ಸರ್ಕಾರದಿಂದ ಒಳ್ಳೆಯ ಮೊತ್ತ ದೆಹಲಿಗೆ ಹೋಗಿದೆ. ಶೇ.60 ರಷ್ಟು ಕಮಿಶನ್‌ ಪಡೆಯಲಾಗುತ್ತಿದೆ ಎಂದರು.

ಏಕಾಏಕಿ ತುಪ್ಪದ ದರವನ್ನು 90 ರೂ. ನಷ್ಟು ಹೆಚ್ಚಿಸಿದ್ದಾರೆ. ಆಲ್ಕೋಹಾಲ್‌, ಹಾಲಿನ ದರ ಏರಿಸಿದ ನಂತರ ತುಪ್ಪದ ದರವನ್ನೂ ಏರಿಸಿದ್ದಾರೆ. ಈವರೆಗೆ 65,000 ಕೋಟಿ ರೂ. ನಷ್ಟು ತೆರಿಗೆಯನ್ನು ಜನರ ಮೇಲೆ ಹೇರಿದ್ದಾರೆ. ಇದು ಪಾಪಿಗಳ ಸರ್ಕಾರ ಎಂದರು.

Farmer Manjegowda’s Death is Directly Caused by the Congress Government: Opposition Leader R. Ashok’s Outrage

The government is directly responsible for farmer Manjegowda committing suicide in front of the Mandya District Collector’s office and dying as a result. How many more farmers does the government want to die? questioned Opposition Leader R. Ashok.

Speaking at a press conference, he said that after the Congress came to power, more than two thousand farmers have committed suicide. Farmers have developed the feeling that this government is not on their side, they won’t get compensation for crop damage, and they won’t get irrigation facilities. There have been massive cuts in funding for all departments. Farmer Manjegowda poured petrol on himself and committed suicide in front of the Mandya District Collector’s office, and he died in the hospital. He had mortgaged his gold jewelry and taken a loan of 11 lakh rupees. When he went to cultivate, forest officials stopped him. Even after such an incident occurred, the government did not come to provide assistance.

The government’s irresponsibility is the cause of this death. The CM is playing musical chairs with the chair and has brought people’s lives onto the streets. How many more farmers’ deaths is this government waiting for? he questioned.

In Chamarajanagar, the work of filling the lake with water was carried out by the BJP. For two years, no irrigation system has been set up there. Wildlife is attacking the locals. No departments have provided any convenience to the people.

Rahul Gandhi does not have the capability to win. That’s why he is saying the ground is crooked. He himself introduced the voting machine and now he is opposing it. If there was vote theft, how did Congress get 136 seats? Everyone knows that vote theft happened in Malur. A good amount from the state government has gone to Delhi. They are taking 60% commission.

They have suddenly increased the price of ghee by 90 rupees. After increasing the prices of alcohol and milk, they have now increased the price of ghee as well. So far, they have imposed taxes worth 65,000 crore rupees on the people. This is the government of sinners.

Related Articles

Back to top button