Film & EntertainmentKarnataka NewsLatest

*BREAKING: ಖ್ಯಾತ ಖಳನಟ ಹರೀಶ್ ರಾಯ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹರೀಶ್ ರಾಯ್ ಅವರನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಹರೀಶ್ ರಾಯ್ ಕೊನೆಯುಸಿರೆಳೆದಿದ್ದಾರೆ. ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.

ʻಓಂʼ ಸಿನಿಮಾದಲ್ಲಿ ಡಾನ್‌ ಪಾತ್ರದ ಮೂಲಕ ಖ್ಯಾತಿ ಪಡೆದಿದ್ದರು. ʻಕೆಜಿಎಫ್‌ʼ ಸರಣಿಯಲ್ಲಿ ʻಚಾಚಾʼ ಆಗಿ ಪ್ರಸಿದ್ದರಾಗಿದ್ದರು. ಸಮರ, ಬೆಂಗಳೂರು ಅಂಡರ್ ವರ್ಲ್ಡ್, ಜೋಡಿಹಕ್ಕಿ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಹಿರಿಯ ನಟನ ಅಗಲಿಕೆಗೆ ಚಿತ್ರರಂಗ ಕಂಬನಿ ಮಿಡಿದಿದೆ.

Home add -Advt

Related Articles

Back to top button