
ಪ್ರಗತಿವಾಹಿನಿ ಸುದ್ದಿ: ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮೊದಲ ಹಂತದ ಮತದಾನ ಆರಂಭವಾಗಿದೆ. ರಾಜ್ಯದ 243 ಕ್ಷೇತ್ರಗಳ ಪೈಕಿ 121 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.
ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಇಂದು ರಾತ್ರಿ 8 ಗಂಟೆಯವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ನಕ್ಸಲ್ ಬಾದಿತ ಪ್ರದೇಶಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಮತದಾನಕ್ಕೆ ಅವಕಾಶವಿದೆ.
ಆರ್ ಜೆಡಿ ನಾಯಕ, ಇಂಡಿಯಾ ಮೈತ್ರಿಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್, ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ವಿಜಯ್ ಕುಮಾರ್ ಸಿನ್ಹಾ ಮೊದಲಾದ ನಾಯಕರು ಮತಚಲಾವಣೆ ಮಾಡಿದ್ದಾರೆ. ಮತದಾರರು ಉತ್ಸಾಹದಿಂದಲೇ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಇತ್ತೀಚಿನ ಮಾಹಿತಿ ಪ್ರಕಾರ ಬೆಳಿಗ್ಗೆ 11 ಗಂಟೆಯವರೆಗೆ ಬಿಹಾರದಲ್ಲಿ ಶೇ.27.65ರಷ್ಟು ಮತದಾನವಾಗಿದೆ.




