
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮಾತುಕತೆಗೆ ಮುಂದಾಗಿದೆ.
ಈ ನಡುವೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಕಬ್ಬು ಬೆಳೆಗಾರರು ಹೋರಾಟ ನಡೆಸುತ್ತಿದ್ದಾರೆ. ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ನಾಳೆ ಬೆಳಿಗ್ಗೆ ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆಯಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಎಫ್ ಆರ್ ಪಿ ನಿಗದಿ ವಿಚಾರವಾಗಿಯೂ ಚರ್ಚಿಸಲಾಗುವುದು ಎಂದರು.




