*ಬೆಳಗಾವಿ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಫುಟ್ಬಾಲ್ ಅಸೋಸಿಯೇಷನ್ ಚುನಾವಣೆಯನ್ನು ನ್ಯಾಯ ಸಮ್ಮತ ಹಾಗೂ ಮುಕ್ತವಾಗಿ ನಡೆಸುವಂತೆ ಆಗ್ರಹಿಸಿ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಮನವಿ ಸಲ್ಲಿಸಲಾಯಿತು.
ಗುರುವಾರ ಸರದಾರ ಮೈದಾನದಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಗಳ ಕಚೇರಗೆ ತೆರಳಿ ಮನವಿ ಸಲ್ಲಿಸಿ ಮುಖ್ಯಮಂತ್ರಿಗಳಿಗೆ ರವಾನಿಸಲಾಯಿತು.
ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನವನ್ನು 12 ವರ್ಷಗಳ ಕಾಲ ನಿಗದಿ ಮಾಡಬೇಕು. ಶೀಘ್ರದಲ್ಲೇ ಕೆಎಸ್ ಎಫ್ ಎ ಆದೇಶದ ಅನ್ವಯ ಬಿಡಿಎಫ್ ಎ ಖಾತೆಯನ್ನು ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಿ ನ್ಯಾಯಸಮ್ಮತ ಚುನಾವಣೆ ನಡೆಸುವ ಮೂಲಕ ಬೆಳಗಾವಿ ಜಿಲ್ಲೆ ಪುಟ್ಬಾಲ್ ಗೆ ಮಾದರಿಯಾಗಬೇಕು ಎಂದು ಒತ್ತಾಯಿಸಿದ್ದರು
ಫುಟ್ಬಾಲ್ ಚುನಾವಣೆಯಲ್ಲಿ ನುರಿತ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿ ಪಾರದರ್ಶಕವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನೂರಾರು ಫುಟ್ ಬಾಲ್ ಆಟಗಾರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




