Kannada NewsKarnataka NewsLatest

*BREAKING: ಹುಲಿ ದಾಳಿಗೆ ಮತ್ತೋರ್ವ ರೈತ ಬಲಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹುಲಿ ದಾಳಿ ಪ್ರಕರಣ ಮುಂದುವರೆದಿದೆ. ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ರೈತ ಬಲಿಯಾಗಿದ್ದಾನೆ.

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೆಹೆಗ್ಗೂಡಿಲು ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಸಾವನ್ನಪ್ಪಿದ್ದಾರೆ. ದಂಡನಾಯ್ಕ @ ಸ್ವಾಮಿ ಮೃತ ರೈತ. ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದೆ.

8 ತಿಂಗಳ ಹಿಂದಷ್ಟೇ ಡಂಡ ನಾಯ್ಕ್ ಮೇಲೆ ಆನೆ ದಾಳಿ ನಡೆಸಿತ್ತು. ಪ್ರಾಣಾಪಾಯದಿಂದ ಪಾರಾಗಿದ್ದರು. ಇದೀಗ ಹುಲಿ ದಾಳಿಗೆ ದಂಡನಾಯ್ಕ ಬಲಿಯಾಗಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button