Kannada NewsLatestNational

*BREAKING: ಬೀದಿನಾಯಿಗಳ ಹಾವಳಿ ತಡೆಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಬೀದಿನಾಯಿಗಳ ಕಾಟ ತಡೆಯಲು ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳಿಗೆ ಬೇಲಿ ಹಾಕುವಂತೆ ಸುಪ್ರೀಮ್ ಕೋರ್ಟ್ ಸೂಚನೆ ನೀಡಿದೆ. ಹೆದ್ದಾರಿಗಳಿಂದ ಬೀದಿ ಪ್ರಾಣಿಗಳನ್ನು ತಡೆಯಲು ಕ್ರಮವಹಿಸುವಂತೆ ಎಲ್ಲಾ ರಾಜ್ಯಗಳಿಗೂ ಸೂಚನೆ ನೀಡಿದೆ.

ಎರಡು ವಾರಗಳಲ್ಲಿ ಬೇಲಿ ಹಾಕುವ ಕೆಲಸವಾಗಬೇಕು. ಇದರ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು. ಸ್ಥಳೀಯ ಆಡಳಿತ ಸಂಸ್ಥೆಗಳು ಮೂರು ತಿಂಗಳಿಗೊಮ್ಮೆ ಪರಿಶೀಲನೆ ನಡೆಸಬೇಕು. ಹೆದ್ದಾರಿಗಳಲ್ಲಿ ಪ್ರಾಣಿಗಳ ಪತ್ತೆಗೆ ಗಸ್ತು ತಂಡ ರಚಿಸಬೇಕು. ಪ್ರಾಣಿಗಳ ಬಗ್ಗೆ ದೂರು ನೀಡಲು ಸಹಾಯವಾಣಿ ತೆರೆಯಬೇಕು ಎಂದು ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.

Home add -Advt

Related Articles

Back to top button