Belagavi NewsBelgaum NewsKarnataka NewsLatest
*BREAKING: ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರ ಲಾಠಿ ಚಾರ್ಜ್: ಹತ್ತರಗಿ ಉದ್ವಿಗ್ನ*

ಪ್ರಗತಿವಾಹಿನಿ ಸುದ್ದಿ: ಟನ್ ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ರೈತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಬೆಳಗಾವಿ ಜಿಲ್ಲೆಯ ಹತ್ತರಗಿಯಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿದ್ದು, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ಪ್ರತಿಭಟನೆ ಹೆಚ್ಚುತ್ತಿದ್ದಂತೆ ಪೊಲೀಸರು ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರು ಲಾಠಿ ಬೀಸುತ್ತಿದ್ದಂತೆ ರೈತರ ಸಹನೆಯ ಕಟ್ಟೆಯೊಡೆದಿದೆ. ರೈತರು ಪೊಲೀಸರ ವಾಹನಗಳ ಮೇಲೆ ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ವಾಹನಗಳು ಜಖಂಗೊಂಡಿವೆ, ಹಲವು ವಾಹನಗಳ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.




