
ಪ್ರಗತಿವಾಹಿನಿ ಸುದ್ದಿ,: ಮದುವೆ ಆಗೋದಾಗಿ ನಂಬಿಸಿ ಯುವತಿಗೆ ಯುವಕನೊಬ್ಬ ಕೈ ಕೊಟ್ಟಿದ್ದು, ಮನ ನೊಂದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕುದರಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಬ್ಯಾಡಗಿ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ನಿವಾಸಿಯಾಗಿರುವ ಸಿಂದೂ (25) ಎಂದು ಗುರುತಿಸಲಾಗಿದೆ.
ಶರತ್ ಎಂಬ ಯುವಕ ನಾಲ್ಕು ವರ್ಷ ಸಿಂಧೂಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಅಂತ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿ ಮಾಡಿದ್ದನು. ಮದುವೆಯಾಗಲು ನಿರಾಕರಿಸಿದ್ದಕ್ಕೆ ಇದೀಗ ಸಿಂಧೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕುಟುಂಬಸ್ಥರು ಯುವಕನ ಮನೆಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ಇನ್ನೂ ರೊಚ್ಚಿಗೆದ್ದ ಕುಟುಂಬಸ್ಥರು ಮೃತದೇಹವನ್ನ ಕುದುರಿಹಾಳ ಗ್ರಾಮದ ಯುವಕ ಶರತ್ ಮನೆಯ ಮುಂದೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಪರಿಸ್ಥಿತಿ ಎದುರಿಸಲಾಗದೆ ಶರತ್ ಕುಟುಂಬ ಸದಸ್ಯರು ಮನೆಗೆ ಬೀಗ ಹಾಕಿ ಎಸ್ಕೆಪ್ ಆಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


