
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಶೀಘ್ರವೇ 18 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಫ್ರೌಡಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿರು.
ರವಿವಾರ ಕೊಡಗಿನ ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ. ಸರ್ಕಾರಿ ಶಾಲೆಯನ್ನು ಬಲಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ಆ ನಿಟ್ಟಿನಲ್ಲಿ ಪೂರ್ವ ಕಿರಿಯ ಪ್ರಾಥಮಿಕ ಆರಂಭಿಸಲಾಗಿದೆ ಎಂದರು.
ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ ಸುಮಾರು 900 ಕೆಪಿಎಸ್ ಶಾಲೆ ಆರಂಭಿಸಲು ಸರ್ಕಾರ ಮಂಜೂರಾತಿ ನೀಡಿದ್ದು, ಸಾರಿಗೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ ಎಂದು ವಿವರಿಸಿದರು.



