
ಪ್ರಗತಿವಾಹಿನಿ ಸುದ್ದಿ: ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಖಂಡಿಸಿ ಇಂದು ವಿಪಕ್ಷ ಬಿಜೆಪಿ ಸಿಎಂ ನಿವಾಸದ ಮುಂದೆ ಪ್ರತಿಭಟನೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಸಿಎಂ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲು ಸಿಎಂ ನಿವಾಸದತ್ತ ಧಾವಿಸಿದ್ದು, ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಸಿಎಂ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.



