Belagavi NewsBelgaum NewsKannada NewsKarnataka NewsLatest
*ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷರ ಅವಿರೋಧ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ,- ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಖಾಸಗಿ ಹೊಟೆಲ್ ನಲ್ಲಿ ಸಭೆ ನಡೆಸಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸುವ ನಿರ್ಧಾರದೊಂದಿಗೆ ಡಿಸಿಸಿ ಬ್ಯಾಂಕ್ ಕಡೆಗೆ ಮುಖಂಡರು ತೆರಳಿದ್ದಾರೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಉಪಾಧ್ಯಕ್ಷರಾಗಿ ರಾಜು ಕಾಗೆ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಜೊಲ್ಲೆ ಹಾಗೂ ಕಾಗೆ ಇಬ್ಬರೂ ಬಾಲಚಂದ್ರ ಜಾರಕಿಹೊಳಿ ಕಾರಿನಲ್ಲೇ ನಾಮಪತ್ರ ಸಲ್ಲಿಕೆಗೆ ತೆರಳಿದರು.
3 ಗಂಟೆಗೆ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ.





