
ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಿಲ್ಲಾ ಕೆಡಿಪಿ ಸಭೆ ನಡೆಯಿತು. ಈ ವೇಳೆ ಜನರನ್ನು ಕಚೇರಿಗೆ ಅಲೆದಾಡಿಸುವುದನ್ನು ನಾನು ಸಹಿಸಲ್ಲ.ಇದು ಅಕ್ಷಮ್ಯ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು…
*ಸಭೆ ಆರಂಭವಾಗುತ್ತಿದ್ದಂತೆಯೇ, ಸಭೆಗೆ ಗೈರು ಆಗಿರುವ ಅಧಿಕಾರಿ ಮತ್ತು ಸಿಬ್ಬಂದಿ ಯಾರಾದರೂ ಇದ್ದರೆ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದರು.
*ಬಳಿಕ ಐತಿಹಾಸಿಕ ದಸರಾ ಹಬ್ಬವನ್ನು ಅತ್ಯಂತ ಪಾರಂಪರಿಕವಾಗಿ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಡಳಿತದ ಅಧಿಕಾರಿ ಮತ್ತು ಸಿಬ್ಬಂದಿ ರ‍್ಗಕ್ಕೆ ಅಭಿನಂದನೆ ಸಲ್ಲಿಸಿದರು.
*ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪರ‍್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು.
*ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು.
*ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ತುಂಬಾ ಮಂದಿ ರ‍್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯುಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಹೆಚ್ಚಾಗಿ ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿದ್ದರೇ ಎಂದು ಪ್ರಶ್ನಿಸಿ, “ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲʼ ಎಂದು ಎಚ್ಚರಿಸಿದರು.
*ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎನ್ನುವ ನಾನು ಕೊಟ್ಟ ಸೂಚನೆ ಪಾಲನೆ ಆಗುತ್ತಿಲ್ಲ. ಇನ್ಸ್‌ಪೆಕ್ಟರ್‌ಗಳು, ಪಿಡಿಒಗಳು, ವಿಎ ಗಳ ಮೇಲೆ ಈ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕಚೇರಿಗಳಿಗೆ ಗೌಪ್ಯ ಭೇಟಿ ನೀಡಿದರೆ ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ. ಇಲ್ಲಿಯವರೆಗೂ ಯಾರ ವಿರುದ್ಧವೂ ದೂರು ಬಂದಿಲ್ಲ. ವರದಿ ಬಂದಿಲ್ಲ ಏಕೆ ಎಂದು ಪ್ರಶ್ನಿಸಿದರು.
*ಹಾಸ್ಟೆಲ್‌ಗಳಲ್ಲಿ ಊಟದ ವ್ಯವಸ್ಥೆಯನ್ನು ಮೇಲಿಂದ ಮೇಲೆ ಪರಿಶೀಲನೆ ನಡೆಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.
*ಹೊಸದಾಗಿ ಬಂದಿರುವ ಡಿಡಿಪಿಐ ಅವರಿಗೆ ನಿಮ್ಮ ಅವಧಿಯಲ್ಲಿ ಉತ್ತಮ ಫಲಿತಾಂಶ ಬರಬೇಕು. ನಾನು ಗಮನಸತಾ ರ‍್ತೇನೆ ಎನ್ನುವ ಸೂಚನೆ ನೀಡಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ದಪಡಿಸಿ ಎಂದರು,
*ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಇಲ್ಲೇ ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳರಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಗರಂ ಆದ ಸಿಎಂ ಬೇಗ ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ ನೀಡಿದರು.
ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ‍್ಯಕರ‍್ತರನ್ನೇ ಹಿಡ್ಕೊಂಡು ಬರ‍್ತೀರಿ…ಇದು ಕೆಟ್ಟ ನಡವಳಿಕೆ: ನಾನು ಸಹಿಸಲ್ಲ. ಕರ‍್ಯರ‍್ತರಿಗೂ ಕೆಟ್ಟ ಹೆಸರು ತರುತ್ತೀರಿ. ಸರ‍್ಕಾರಕ್ಕೂ ಕೆಟ್ಟ ಹೆಸರು ತರಲು ಮುಂದಾದರೆ ಸಹಿಸಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.




