*ಮೂರು ಜನ ಅಣ್ತಮ್ಮಂದಿರು ಸೇರಿ ಜೊಲ್ಲೆ ಅವರನ್ನು ಅಧ್ಯಕ್ಷರಾಗಿ ಮಾಡಿದ್ದೇವೆ: ಬಾಲಚಂದ್ರ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಎಲ್ಲಾ ಸದಸ್ಯರ ಜೊತೆಗೆ ಚರ್ಚೆ ಮಾಡಿ, ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎರಡು ಸ್ಥಾನ ಲಿಂಗಾಯತ ಸಮಾಜಕ್ಕೆ ನೀಡಿದ್ದೇವೆ. ಜೊಲ್ಲೆ ಅವರನ್ನು ಜಾರಕಿಹೊಳಿ ಅವರು ಸೋಲಿಸುತ್ತಾರೆ ಎಂದು ಅಪಪ್ರಚಾರ ಮಾಡಿದ್ದರು. ಮೂರು ಜನ ಅಣ್ತಮ್ಮಂದಿರು ಸೇರಿಕೊಂಡು ಗೆಲ್ಲಿಸಿ ಅಧ್ಯಕ್ಷ ಕೂಡ ಮಾಡಿದ್ದೇವೆ. ಐದು ವರ್ಷದಲ್ಲಿ ಬ್ಯಾಂಕ್ ಒಂದನೇ ಸ್ಥಾನಕ್ಕೆ ತರುತ್ತೇವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬ್ಯಾಂಕ್ ನಲ್ಲಿ ಕುಳಿತು ರಾಜಕಾರಣ ಮಾಡಿ ಬ್ಯಾಂಕ್ ನಡೆಸುತ್ತಿದ್ದರು. ಸಾವಿರ ಕೋಟಿ ವಿತ್ ಡ್ರಾ ಆಗುತ್ತಿದೆ ಎಂದು ಹಬ್ಬಿಸುತ್ತಿದ್ದಾರೆ. ಪ್ರತಿ ವರ್ಷ ಈ ಸಮಯದಲ್ಲಿ ವಿತ್ ಡ್ರಾ ಮಾಡೋದು ಸಹಜ. ಚಿನ್ನದ ಬೆಲೆ ಏರಿಕೆ ಹಿನ್ನೆಲೆ ಜಾಸ್ತಿ ಡ್ರಾ ಆಗಿದೆ. ಕರ್ನಾಟಕದಲ್ಲಿ ಡಿಸಿಸಿ ಬ್ಯಾಂಕ್ ನಂಬರ್ ಒನ್ ಮಾಡುತ್ತೇವೆ. ರಾಜಕಾರಣದಲ್ಲಿ ವಿರೋಧಿಗಳಿಗೆ ಸುಮ್ಮನೆ ಕೂಡಿ ಎಂದು ಹೇಳಲು ಆಗಲ್ಲ ಎಂದು ಅವರು ತಿಳಿಸಿದರು.



