*ಚರ್ಚೆಗೆ ಬಂತು ಸೀರೆ: ಮೈಸೂರು ಸಿಲ್ಕ್ ಸೀರೆ ಉತ್ಪಾದನೆ ಹೆಚ್ಚಿಸಲು ಸಿಎಂ ಸೂಚನೆ*

ಸಭೆಯ ಹೈಲೈಟ್ಸ್:
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಹಲವು ಪ್ರಮುಖ ವಿಷಯಗಳು ಚರ್ಚೆಯಾಗಿದ್ದು, ಅಧಿಕಾರಿಗಳಿಗೆ ಸಿಎಂ ಮಹತ್ವದ ಸೂಚನೆ ನೀಡಿದರು. ಈ ಕುರಿತ ಮಾಹಿತಿ ಇಲ್ಲಿದೆ.
ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು…
*ಸಭೆ ಆರಂಭವಾಗುತ್ತಿದ್ದಂತೆಯೇ, ಸಭೆಗೆ ಗೈರು ಆಗಿರುವ ಅಧಿಕಾರಿ ಮತ್ತು ಸಿಬ್ಬಂದಿ ಯಾರಾದರೂ ಇದ್ದರೆ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದರು.
*ಬಳಿಕ ಐತಿಹಾಸಿಕ ದಸರಾ ಹಬ್ಬವನ್ನು ಅತ್ಯಂತ ರ್ಥಪರ್ಣವಾಗಿ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಡಳಿತದ ಅಧಿಕಾರಿ ಮತ್ತು ಸಿಬ್ಬಂದಿ ರ್ಗಕ್ಕೆ ಅಭಿನಂದನೆ ಸಲ್ಲಿಸಿದರು.
*ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪರ್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು.
*ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು.
*ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ತುಂಬಾ ಮಂದಿ ರ್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯುಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಹೆಚ್ಚಾಗಿ ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿದ್ದರೇ ಎಂದು ಪ್ರಶ್ನಿಸಿ, “ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲʼ ಎಂದು ಎಚ್ಚರಿಸಿದರು.
*ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎನ್ನುವ ನಾನು ಕೊಟ್ಟ ಸೂಚನೆ ಪಾಲನೆ ಆಗುತ್ತಿಲ್ಲ. ಇನ್ಸ್ಪೆಕ್ಟರ್ಗಳು, ಪಿಡಿಒಗಳು, ವಿಎ ಗಳ ಮೇಲೆ ಈ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕಚೇರಿಗಳಿಗೆ ಗೌಪ್ಯ ಭೇಟಿ ನೀಡಿದರೆ ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ. ಇಲ್ಲಿಯವರೆಗೂ ಯಾರ ವಿರುದ್ಧವೂ ದೂರು ಬಂದಿಲ್ಲ. ವರದಿ ಬಂದಿಲ್ಲ ಏಕೆ ಎಂದು ಪ್ರಶ್ನಿಸಿದರು.
*ಹಾಸ್ಟೆಲ್ಗಳಲ್ಲಿ ಊಟದ ವ್ಯವಸ್ಥೆಯನ್ನು ಮೇಲಿಂದ ಮೇಲೆ ಪರಿಶೀಲನೆ ನಡೆಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.
*ಹೊಸದಾಗಿ ಬಂದಿರುವ ಡಿಡಿಪಿಐ ಅವರಿಗೆ ನಿಮ್ಮ ಅವಧಿಯಲ್ಲಿ ಉತ್ತಮ ಫಲಿತಾಂಶ ಬರಬೇಕು. ನಾನು ಗಮನಸತಾ ರ್ತೇನೆ ಎನ್ನುವ ಸೂಚನೆ ನೀಡಿದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ದಪಡಿಸಿ ಎಂದರು,
*ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಇಲ್ಲೇ ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳರಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಗರಂ ಆದ ಸಿಎಂ ಬೇಗ ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ ನೀಡಿದರು.
ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರನ್ನೇ ಹಿಡ್ಕೊಂಡು ಬರ್ತೀರಿ…ಇದು ಕೆಟ್ಟ ನಡವಳಿಕೆ: ನಾನು ಸಹಿಸಲ್ಲ. ಕರ್ಯರ್ತರಿಗೂ ಕೆಟ್ಟ ಹೆಸರು ತರುತ್ತೀರಿ. ಸರ್ಕಾರಕ್ಕೂ ಕೆಟ್ಟ ಹೆಸರು ತರಲು ಮುಂದಾದರೆ ಸಹಿಸಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.
ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿಕೊಂಡಿಲ್ಲದ್ದಕ್ಕೆ ಗರಂ ಆದ ಸಿಎಂ: ಜಂಟಿ ಸಭೆಗಳನ್ನು ನಡೆಸಲು ಸೂಚಿಸಿದರು
ಚರ್ಚೆಗೆ ಬಂತು ಸೀರೆ: ಮೈಸೂರು ಸಿಲ್ಕ್ ಸೀರೆ ಉತ್ಪಾದನೆ ಹೆಚ್ಚಿಸಲು ಸೂಚನೆ
*ಕೃಷಿ ಇಲಾಖೆ: ಒಟ್ಟು ನೀರಾವರಿ ಭೂಮಿಯಲ್ಲಿ ವಾಡಿಕೆಗಿಂತ ೩೦೦೦ ಹೆಕ್ಟೇರ್ ಭೂಮಿಯಲ್ಲಿ ಕಡಿಮೆ ಬಿತ್ತನೆ ಆಗಿರುವುದಕ್ಕೆ ಏನು ಕಾರಣ, ಮಳೆ ಹೇರಳವಾಗಿ ಬಿದ್ದಿದೆ. ನೀರಿನ ಕೊರತೆಯೂ ಇಲ್ಲ. ಹೀಗಿದ್ದೂ ಬಿತ್ತನೆ ಏರಿಯಾ ಕಡಿಮೆ ಆಗಿರುವುದಕ್ಕೆ ಏನು ಕಾರಣ ಎಂದು ಕೃಷಿ ಇಲಾಖೆಯ ಜಂಟಿ ನರ್ದೇಶಕರಿಗೆ ಸಿಎಂ ಪ್ರಶ್ನಿಸಿದರು.
ಹುರುಳಿ, ಮುಸುಕಿನ ಜೋಳ ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ನಮ್ಮಲ್ಲಿ ಸಂಗ್ರಹ ಇದೆ. ರೈತರಿಗೆ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನೂ ದಾಸ್ತಾನು ಮಾಡಿಟ್ಟುಕೊಂಡಿದ್ದೇವೆ. ಯೂರಿಯಾ ಅಗತ್ಯ ಇರುವುದಕ್ಕಿಂತ ಹೆಚ್ಚು ಸಂಗ್ರಹವಿದೆ ಎಂದು ಜಂಟಿ ನಿರ್ದೇಶಕರು ಉತ್ತರಿಸಿದರು.
ಬೇರೆ ಬೇರೆ ತಾಲ್ಲೂಕಿನ ಕೃಷಿ ಭೂಮಿಗಳಿಗೆ ಭೇಟಿ ನೀಡಿದ್ದೀರಾ? ಭೇಟಿ ನೀಡಿದ ಬಗ್ಗೆ ಡೈರಿ ಬರೆದಿದ್ದೀರಾ? ನಿಮ್ಮ ಕೆಳ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಡೈರಿ ಬರೆದಿರುವುದನ್ನು, ಸ್ಥಳಕ್ಕೆ ಭೇಟಿ ನೀಡಿರುವುದನ್ನು ಪರಿಶೀಲಿಸಿದ್ದೀರಾ ಎಂದು ಕೇಳಿದ ಸಿಎಂ ಡೈರಿ ತೂರಿಸುವಂತೆ ಸೂಚಿಸಿದರು.
ಪ್ರವಾಹದಿಂದ ಆಗಿರುವ ಅನಾಹುತಗಳು ಮತ್ತು ಪರಿಹಾರ ಹಾಗೂ ರೈತರ ಆತ್ಮಹತ್ಯೆಗಳು ಹಾಗೂ ಪರಿಹಾರ ಸರ್ಪಕವಾಗಿ ಒದಗಿಸಿರುವ ಬಗ್ಗೆ ಸಿಎಂ ಮಾಹಿತಿ ಪಡೆದು ದಾಖಲೆ ಪರಿಶೀಲಿಸಿದರು.
ಯಾವ ಯಾವ ಬೆಳೆಗಳಿಗೆ ಯಾವ ಯಾವ ರೋಗ ಬಂದಿದೆ? ಇದಕ್ಕೆ ಕಾರಣಗಳನ್ನು ಮತ್ತು ಪರಿಣಾಮಗಳನ್ನು ರೈತರಿಂದ ಕೇಳಿ ದಾಖಲು ಮಾಡಿಕೊಂಡಿದ್ದೀರಾ? ಎಷ್ಟು ಹೆಕ್ಟೇರ್ ಬೆಳೆಗೆ ವಿಮೆ ಹಣ ಸಂದಾಯ ಆಗಿದೆ ಎನ್ನುವ ಬಗ್ಗೆ ಮಾಹಿತಿ ಪಡೆದು ದಾಖಲೆಗಳನ್ನು ಪರಿಶೀಲಿಸಿದರು.
ಮಹಾರಾಷ್ಟ್ರಕ್ಕೆ ಹೋಗಿ ಅಧ್ಯಯನ ನಡೆಸಿಕೊಂಡು ಬನ್ನಿ: ಸಿಎಂ ಸೂಚನೆ: ಮಹಾರಾಷ್ಟ್ರದ ರೈತರು ರ್ಷಕ್ಕೆ ಮೂರು ಬೆಳೆ ಬೆಳೆಯುತ್ತಾರೆ. ನಮ್ಮ ಜಿಲ್ಲೆಯಲ್ಲಿ ಎರಡು ಬೆಳೆ ಮಾತ್ರ ಸಾಧ್ಯವಾಗುತ್ತಿದೆ. ಒಮ್ಮೆ ಮಹಾರಾಷ್ಟ್ರಕ್ಕೆ ತೆರಳಿ ಅಧ್ಯಯನ ಮಾಡಿಕೊಂಡು, ನಮ್ಮ ಇಲ್ಲಿನ ವಾತಾವರಣ ಮತ್ತು ಪರಿಸ್ಥಿತಿಗೆ ಹೇಗೆ ಅಳವಡಿಸಲು ಸಾಧ್ಯ ಎನ್ನುವ ಬಗ್ಗೆ ವರದಿ ನೀಡಿ ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ಜಂಟಿ ನರ್ದೇಶಕರಿಗೆ ಸೂಚಿಸಿದರು.
ತೋಟಗಾರಿಕೆ ಬೆಳೆಯುವ ಪ್ರದೇಶ ಹೆಚ್ಚಾಗಿರುವ ಬಗ್ಗೆ ಮಾಹಿತಿ ಪಡೆದ ಸಿಎಂ:
ಬಾಳೆ ಬೆಳೆ ಹಿಂದಿನ ತಿಂಗಳುಗಳಲ್ಲಿ ಕಡಿಮೆ ಆಗಿತ್ತು. ಈಗ ಹೆಚ್ಚಾಗಿದೆ. ಶುಂಟಿ ಕೂಡ ಹೆಚ್ಚಾಗಿದೆ. ಅಡಿಕೆ ಬೆಳೆಯುವ ಪ್ರಮಾಣ ಕೂಡ ಹೆಚ್ಚಾಗಿದೆ. ಶುಂಟಿ ಮತ್ತು ಇತರೆ ಬೆಳೆಗಳಿಗೆ ರೋಗ ಬಾದಿಸಿತ್ತು. ವಿಜ್ಞಾನಿಗಳ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆವು. ಬಿಸಿಲಿನ ಕೊರತೆಯಿಂದ ಕಡಿಮೆಯಾಗಿತ್ತು. ಬಿಸಿಲು ಬರುತ್ತಿದ್ದಂತೆ ಮತ್ತೆ ಇಳುವರಿ ಹೆಚ್ಚಾಗುವ ಬಗ್ಗೆ ವಿಜ್ಞಾನಿಗಳು ತಿಳಿಸಿದ್ದಾರೆ. ತೆಂಗು ಮತ್ತು ಅಡಿಕೆ ಬೆಳೆಗೆ ಕೆಲವು ಕಡೆ ರೋಗ ಬಂದಿದೆ. ಸ್ಥಳಕ್ಕೇ ಹೋಗಿ ರೋಗ ತಡೆಗಟ್ಟಲು ಮೊದಲ ಹಂತದಲ್ಲಿ ಕ್ರಮ ಕೈಗೊಂಡು ಬಳಿಕ ರೋಗ ನಿವಾರಣೆಗೆ ಔಷಧಗಳನ್ನು ಸಿಂಪಡಿಸಲಾಗಿದೆ. ಆದಾಯ ಹೆಚ್ಚು ಎನ್ನುವ ಕಾರಣಕ್ಕೆ ರೈತರು ತೋಟಗಾರಿಕಾ ಬೆಳೆಗಳಿಗೆ ಹೆಚ್ಚೆಚ್ಚು ಒಲವು ತೋರಿಸುತ್ತಿದ್ದಾರೆ ಎಂದು ತೋಟಗಾರಿಕಾ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಸಭೆಗೆ ಮಾಹಿತಿ ನೀಡಿದರು.
ಸಭೆಗೆ ಬಂತು ರೇಷ್ಮೆ ಸೀರೆ:
ರೇಷ್ಮೆ ಇಲಾಖೆ ಮತ್ತು ರೇಷ್ಮೆ ಉತ್ಪಾದನೆ ಬಗ್ಗೆ ರ್ಚೆ ನಡೆಯುವ ವೇಳೆ ರಾಜ್ಯದಲ್ಲಿ ಮೈಸೂರು ಸಿಲ್ಕ್ ಸೀರೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು ಮಹಿಳೆಯರು ಐದಾರು ಗಂಟೆ ಕ್ಯೂ ನಿಂತರೂ ಸೀರೆ ಸಿಗುತ್ತಿಲ್ಲ. ಬೇಡಿಕೆಗೆ ತಕ್ಕಂತೆ ಸೀರೆ ಸಿದ್ದಪಡಿಸಲು ಸಮಸ್ಯೆ ಏನು? ಇದಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರ್ ನಾಥ್ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಬಗ್ಗೆ ಗಮನ ಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಪಶು ಸಂಗೋಪನಾ ಇಲಾಖೆ:
*ಜಿಲ್ಲೆಯಲ್ಲಿ ರಾಸುಗಳಿಗೆ ಕಾಲುಬಾಯಿ ರೋಗ ಬರದಂತೆ ತಡೆಯಲು ಹಾಕಲಾದ ಲಸಿಕೆ ಪ್ರಮಾಣ ಎಷ್ಟಿದೆ ಎಂದು ಸಿಎಂ ಅಧಿಕಾರಿಗಳಿಗೆ ಪ್ರಶ್ನಿಸಿದರು. ಶೇ೯೬.೫೫ ರಷ್ಟು ಲಸಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
*ಕುರಿ ಮೇಕೆಗಳಲ್ಲಿ ಕರುಳುಬೇನೆ ರೋಗದ ವಿರುದ್ಧ ಶೇ ೧೦೧.೬೯ ರಷ್ಟು ಲಸಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
*ಜಾನವಾರುಗಳಲ್ಲಿ ಕಂದು ರೋಗದ ವಿರುದ್ಧ ಶೇ೯೩.೩೩ ರಷ್ಟು ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಿದರು.
*ಕುರಿಗಾಹಿಗಳಿಗೆ ಆಗುತ್ತಿದ್ದ ತೊಂದರೆಗಳು ಮತ್ತು ಕಳ್ಳ ಕಾಕರಿಂದ ರಕ್ಷಣೆ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಕುರಿಗಾಹಿಗಳ ಮೇಲೆ ದರ್ಜನ್ಯ ಪ್ರಕರಣಗಳು ನಡೆದಿಲ್ಲ ಎನ್ನುವ ವರದಿಯನ್ನು ಅಧಿಕಾರಿಗಳು ಸಭೆಗೆ ನೀಡಿದರು.
ಮಾಹಿತಿಗಾಗಿ ನಿಮ್ಮ ಮನೆಗೆ ಬರ್ಲಾ ನಾನು: ಅರಣ್ಯಾಧಿಕಾರಿಗೆ ಚಳಿ ಬಿಡಿಸಿದ ಸಿಎಂ
ಮೈಸೂರು ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯದ ಪ್ರಮಾಣ ಎಷ್ಟಿದೆ? ಯಾವ ಭಾಗಗಳಲ್ಲಿ ವಿಸ್ತರಣೆ ಆಗಿದೆ ಎನ್ನುವ ಮಾಹಿತಿ ನೀಡುವಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗೆ ಸಿಎಂ ಪ್ರಶ್ನಿಸಿದರು.
ಅಧಿಕಾರಿ ಸರಿಯಾದ ಅಂಕಿ ಅಂಶ ನೀಡದೆ, ಮಾಹಿತಿ ನೀಡಲು ತಡಬಡಾಯಿಸಿದ ಅಧಿಕಾರಿ ಬಗ್ಗೆ ಸಿಎಂ ಗರಂ ಆದರು.
ಸರಿಯಾದ ಮಾಹಿತಿ ತರದೆ ಅತ್ತೆ ಮನೆಗೆ ಬಂದಂತೆ ಕೈ ಬೀಸಿಕೊಂಡು ಬರ್ತೀರಾ ? 25 ವರ್ಷದಿಂದ ಕೆಲಸ ಮಾಡಿ ರೈತರ ಜಮೀನಿನಲ್ಲಿ ಎಷ್ಟು ಗಿಡ ನೆಟ್ಟಿದ್ದೀರಿ ? ಎಷ್ಟು ಎಕರೆ ಗಿಡ ಬೆಳೆಸಿದ್ದೀರಿ ಎನ್ನುವ ಮಾಹಿತಿ ಇಲ್ಲದಿದ್ದರೆ ನಿಮ್ಮ ಕಾರ್ಯಕ್ಷಮತೆ ಇಷ್ಟೆನಾ ಎಂದು ಗರಂ ಆಗಿ ಮಾಹಿತಿಗಾಗಿ ನಾನು ನಿಮ್ಮ ಮನೆಗೆ ಬರಬೇಕಾ ಎಂದು ಪ್ರಶ್ನಿಸಿದರು.
*ನೀಲಗಿರಿ ನಿಷೇದ ಆದ ಮೇಲೂ ಮತ್ತೆ ನೀಲಗಿರಿ ಪ್ಲಾಂಟೇಷನ್ ಕಾಣಿಸುತ್ತಿರುವುದರ ಬಗ್ಗೆ ಶಾಸಕರಾದ ತನ್ವೀರ್ ಸೇಠ್ ಅವರು ಸಭೆಯ ಗಮನಕ್ಕೆ ತಂದರು.
ಇದಕ್ಕೆ ಉತ್ತರಿಸಿದ ಅರಣ್ಯಾಧಿಕಾರಿಗಳು ಹೊಸದಾಗಿ ನೀಲಗಿರಿ ಪ್ಲಾಂಟೇಷನ್ ಗೆ ಅವಕಾಶ ನೀಡಿಲ್ಲ. ಇರುವ ಬೆಳೆ ಕಟಾವು ಆದ ಬಳಿಕ ಅಲ್ಲಿ ಮತ್ತೆ ಬೆಳೆಯಲು ಅವಕಾಶವಿಲ್ಲ ಎಂದು ಉತ್ತರಿಸಿದರು.
ಮಾನವ-ಹುಲಿ ಸಂಘರ್ಷದ ಬಗ್ಗೆ ಗಂಭೀರ ಚರ್ಚೆ
ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಏನು ಕಾರಣ ? ವೈಜ್ಞಾನಿಕ ಕಾರಣ ನೀಡಿ: ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿ ಪರಿಹಾರ ಕ್ರಮಗಳನ್ನು ಸೂಚಿಸಿದರು
ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು
ಲಾಂಟೆನಾ ತೆಗೆಸಬೇಕು
ಅರಣ್ಯದಲ್ಲಿ ಮೇವು ಬೆಳೆಸಬೇಕು
ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು
*ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು ಎಂದು ಸಿಎಂ ಸೂಚಿಸಿದರು.
*ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಕಾರಿಗಳು ಸಭೆಗೆ ಮಾಹಿತಿ ನೀಡಿದರು.*ಅರಣ್ಯ ಹಕ್ಕು ಕಾಯ್ದೆಗೆ ಬಂದಿರುವ 7000 ಅರ್ಜಿಗಳಲ್ಲಿ 5900 ಅರ್ಜಿಗಳು ತಿರಸ್ಕರಿಸಲ್ಪಟ್ಟಿರುವುದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು.
*ಇವು 2019-20 ರಿಂದ ತಿರಸ್ಕರಿಲ್ಪಟ್ಟ ಅರ್ಜಿಗಳು. ತಿರಸ್ಕರಿಸುವಾಗ ಸ್ಪಷ್ಟವಾದ, ನೈಜವಾದ ಕಾರಣ ನೀಡದಿದ್ದರೆ ಅಂತಹ ಅರ್ಜಿಗಳನ್ನು ಮರುಪರಿಶೀಲನೆಗೆ ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ: ಸಿ.ಎಂ ಸೂಚನೆ
*ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು,
ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ ಎನ್ನುವ ಸೂಚನೆ ನೀಡಿದರು.


