
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೇ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಬರುತ್ತಿರುವ ಸುದ್ದಿ ಸುಳ್ಳು ಎಂದು ಪುತ್ರಿ ಇಶಾ ಡಿಯೋಲ್ ಹೇಳಿದ್ದಾರೆ.
ಸೋಮವಾರ ನಟ ಧರ್ಮೇಂದ್ರ (89) ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆ ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಗಂಭಿರವಾಗಿದ್ದರಿಂದ ವೆಂಟಿಲೇಟರ್ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎನ್ನುವ ಸುದ್ದಿ ಹರಡಿತ್ತು.




