Karnataka NewsLatestPolitics

*ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಕಟ್ಟೆಚ್ಚರಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ*

ದೆಹಲಿ ಕಾರು ಸ್ಫೋಟದಲ್ಲಿ ಹಲವರು ಸಾವು: ತೀವ್ರ ಸಂತಾಪ ಸೂಚಿಸಿದ ಸಿಎಂ


ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Home add -Advt

ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


Related Articles

Back to top button