
ಪ್ರಗತಿವಾಹಿನಿ ಸುದ್ದಿ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಖ್ಯಾತ ಯೂಟ್ಯೂಬರ್ ವಿರುದ್ಧ ಬೆಂಗಳೂರಿನ ಕೋಣನಕುಂಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿ2 ಸೂರ್ಯ ಎಂಬ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಪರಿಚಯಿಸಿಕೊಂಡಿದ್ದ ಸೂರ್ಯ ಸೋಷಿಯಲ್ ಮೀಡಿಯಾ ಮೂಲಕ ಆಕೆಯ ಫೋಟೋಗಳನ್ನು ಕದ್ದು, ಬೆದರಿಸುತ್ತಿದ್ದ. ಇದೇ ವಿಚಾರವಾಗಿ ಮತುಕತೆಗೆ ತನ್ನ ಮನೆಗೆ ಬರುವಂತೆ ಕರೆದು, ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಸಹಕರಿಸದಿದ್ದಾಗ ಹಲ್ಲೆ ನಡೆಸಿ, ಮೊಬೈಲ್ ಫೋನ್ ಕಿತ್ತುಕೊಂಡು ಒಡೆದು ಹಾಕಿದ್ದಾನೆ.
ಯುವತಿಗೆ ಬೆದರಿಕೆ ಹಾಕಿದ್ದಲ್ಲದೇ ಮಾನಹಾನಿ ಮಾಡುವುದಾಗಿ ಧಮ್ಕಿ ಹಾಕಿದ್ದಾನೆ. ಆಕೆಯ ತಂದೆ-ತಾಯಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾನೆ ಎಂದು ಸಂತ್ರಸ್ತ ಯುವತಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸೂರ್ಯ ವಿರುದ್ಧ ಪ್ರಕರಣ ದಾಖಲಾಗಿದೆ.


