
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಎರಡನೇ ಸಭೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಿತು.
ಮಲಪ್ರಭಾ ನೀರಾವರಿ ಯೋಜನೆಯ ಸಲಹಾ ಸಮಿತಿಯ ಅಧ್ಯಕ್ಷರೂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆಯಂತೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್.ಕೋನರೆಡ್ಡಿ, ಕಾಡಾ ಅಧ್ಯಕ್ಷ ಯುವರಾಜ ಕದಂ, ನೀರು ಬಳಕೆದಾರರ ಮಹಾಮಂಡಳಿಯ ಅಧ್ಯಕ್ಷ ಸದುಗೌಡ ಪಾಟೀಲ, ಉಪಾಧ್ಯಕ್ಷ ಚಿಕ್ಕಮಠ್ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.




