Film & EntertainmentKarnataka NewsNational

*ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಖ್ಯಾತ ಸಿನಿಮಾ ‘ತಿಥಿ’. ಈ ಸಿನೆಮಾದಲ್ಲಿ  ಪ್ರೇಕ್ಷಕರ ಮನ ಗೆದ್ದಿದ್ದ ಗಡ್ಡಪ್ಪ (89) ಹೆಸರಿನ ಪಾತ್ರ ಮಾಡಿದ್ದ ಚನ್ನೇಗೌಡ ಅವರು ನಿಧನ ಹೊಂದಿದ್ದಾರೆ

ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು (ನವೆಂಬರ್ 12) ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. 

ಗಡ್ಡಪ್ಪ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಪಾಂಡವಪುರಕ್ಕೆ ಹೋಗುವ ರಸ್ತೆಯಲ್ಲಿ ಈ ಊರು ಸಿಗುತ್ತದೆ. ಅವರು ‘ತಿಥಿ’ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದರು. ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು

ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು

Home add -Advt

ಗಡ್ಡಪ್ಪ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. 

Related Articles

Back to top button