*BREAKING: ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಕಬ್ಬಿನ ಲೋಡ್ ಗೆ ಬೆಂಕಿ ಹಚ್ಚಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಪ್ರತಿ ಟನ್ ಕಬ್ಬಿಗೆ ರಾಜ್ಯ ಸರ್ಕಾರ 3300 ರೂಪಾಯಿ ನಿಗದಿ ಮಾಡಿದ್ದರೂ ಪ್ರತಿಭಟನೆ ಮುಂದುವರೆಸಿರುವ ಬಾಗಲಕೋಟೆ ಜಿಲ್ಲೆಯ ಮುಧೋಳ ಭಾಗದ ಕಬ್ಬು ಬೆಳೆಗಾರರು ಟನ್ ಕಬ್ಬಿಗೆ 3500 ರೂಪಾಯಿ ನಿಗದಿ ಮಾಡಲೇಬೇಕು ಎಂದು ಪಟ್ಟು ಹಿಡಿದು ಹೋರಾಟ ತೀವ್ರಗೊಳಿಸಿದ್ದಾರೆ.
ಮುಧೋಳದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನಾ ಸ್ಥಳದ ವೇದಿಕೆಗೆ ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದಿರುವ ಕಾರಣಕ್ಕೆ ಮತ್ತಷ್ಟು ರೊಚ್ಚಿಗೆದ್ದುರುವ ರೈತರು ಇಂದು ಕಬ್ಬು ಲೋಡ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾಲಿಂಗಪುರ ಬಳಿ ಸಮೀರವಾಡಿ ಗೋದಾವರಿ ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ನ್ನು ಅಡ್ಡಗಟ್ಟಿದ ಹೋರಾಟಗಾರರು, ಕಬ್ಬಿನ ಲೋಡ್ ಗೆ ಬೆಂಕಿ ಹಚ್ಚಿ ಟ್ರ್ಯಾಕ್ಟರ್ ನ್ನು ಕೆಡವಿದ್ದಾರೆ. ಬಳಿಕ ಬೈಕ್ ಹಾಗೂ ವಿವಿಧ ವಾಹನಗಳಲ್ಲಿ ಕಾರ್ಖಾನೆ ಮುತ್ತಿಗೆ ಹಾಕಲು ಕಾರ್ಖಾನೆಯತ್ತ ಪ್ರತಿಭಟನಾಕಾರರು ಮುನ್ನುಗ್ಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.




