Kannada NewsKarnataka NewsLatest

2 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಚಾಲನೆ ನೀಡಿದರು.
ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಿಂದ  ಸುಮಾರು 67.38 ರೂಗಳ ವೆಚ್ಚದಲ್ಲಿ, ಗೋಜಗಾ ಗ್ರಾಮದಲ್ಲಿ 30.84 ಲಕ್ಷ ರೂ. ವೆಚ್ಚದಲ್ಲಿ ಹಾಗೂ ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ 1.07 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಕ್ಷೇತ್ರದ ಪ್ರತಿ ಹಳ್ಳಿ ಹಿಂದೆಂದೂ ಕಾಣದಂತಹ ಸುಧಾರಿತ ರಸ್ತೆಗಳನ್ನು ಕಾಣುತ್ತಿದೆ. ಇದರಿಂದಾಗಿ ಕೃಷಿ ಉತ್ಪನ್ನ ಸೇರಿದಂತೆ ಗ್ರಾಮಸ್ಥರು ಅಗತ್ಯ ಸಾಮಗ್ರಿಗಳನ್ನು ಸಾಗಿಸಲು, ವಾಹನ ಸಂಚಾರ ಸುಲಭಗೊಳಿಸಲು ಸಾಧ್ಯವಾಗುತ್ತಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿಜವಾದ ಅಭಿವೃದ್ಧಿ ನನ್ನ ಅವಧಿಯಲ್ಲಿ ಆರಂಭವಾಗಿದೆ. ಯಾವುದೇ ಜಾತಿ, ಭಾಷೆ ಬೇಧವಿಲ್ಲದೆ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಸಂಕಲ್ಪ ಮಾಡಿದ್ದೇನೆ. ಇದಕ್ಕೆ ನಿಮ್ಮೆಲ್ಲರ ಆಶಿರ್ವಾದ, ಸಹಕಾರ ಕಾರಣ ಎಂದು ಲಕ್ಷ್ಮಿ ಹೆಬ್ಬಾಳಕರ್ ಈ ಸಂದರ್ಭದಲ್ಲಿ ತಿಳಿಸಿದರು. 
  ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ  ಕಾರ್ಯಕರ್ತರು ಉಪಸ್ಥಿತರಿದ್ದರು.

 

Home add -Advt

Related Articles

Back to top button