
ಪ್ರಗತಿವಾಹಿನಿ ಸುದ್ದಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಕೂಟ ಭರ್ಜರಿ ಗೆಲುವು ಸಾಧಿಸಿದೆ. 203 ಕ್ಷೇತ್ರಗಳಲ್ಲಿ ಎನ್ ಡಿಎ ಮುನ್ನಡೆಯಲ್ಲಿದೆ.
203 ಸ್ಥಾನಗಳಲ್ಲಿ ಮುನ್ನಡೆಯಲ್ಲಿರುವ ಎನ್ ಡಿಎ ಗೆಲುವಿನತ್ತ ಧಾಪುಗಾಲಿಟ್ಟಿದೆ. ಎನ್ ಡಿಎ ಗೆಲುವಿನ ನಾಗಾಲೋಟದ ಬೆನ್ನಲ್ಲೇ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಬಿಜೆಪಿ ಹಾಗೂ ಎನ್ ಡಿಎ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದಾರೆ. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.




