Film & EntertainmentKarnataka NewsLatest
*BREAKING: ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ: ನಿರ್ಮಾಪಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಎವಿಆರ್ ಗ್ರೂಪ್ ಸಂಸ್ಥಾಪಕ, ಉದ್ಯಮಿಯಾಗಿರುವ ನಿರ್ಮಾಪಕ ಅರವಿಂದ್ ವ್ವೆಂಕಟೇಶ್ ರೆಡ್ಡಿ, ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ನಾಯಕ ಕೂಡ ಆಗಿದ್ದಾರೆ. ಸ್ಯಾಂಡಲ್ ವುಡ್ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಅರವಿಂದ್ ವೆಂಕಟೇಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ಶ್ರೀಲಂಕಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.




