Kannada NewsKarnataka NewsLatest
*ಉಪನ್ಯಾಸಕನಿಂದ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: FIR ದಾಖಲು

ಪ್ರಗತಿವಾಹಿನಿ ಸುದ್ದಿ: ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕ ವಿದ್ಯಾರ್ಥಿನಿಗೆ ಹೆಚ್ಚು ಮಾರ್ಕ್ಸ್ ಕೊಡುತ್ತೇನೆ. ಒಳ್ಳೆಯ ಕೆಲಸ ಕೊಡಿಸುತ್ತೇನೆ ಎಂದು ಹೇಳಿ ಹೊರಗಡೆ ಪಬ್ ಗೆ ಹೋಗಿ ಮಜಾ ಮಾಡೋಣ ಎಂದು ಕರೆದು ಕಿರುಕುಳ ನೀಡಿದ್ದಾನೆ.
ನೊಂದ ವಿದ್ಯಾರ್ಥಿನಿ ಮಹಿಳಾ ಉಪನ್ಯಾಸಕರ ಬಳಿ ದೂರು ನೀಡಿದ್ದಳು. ವಿಷಯ ತಿಳಿದ ಉಪನ್ಯಾಸಕ, ತಾನು ಹೇಳಿದಂತೆ ಕೇಳದಿದ್ದರೆ ನಿನ್ನನ್ನು ಫೇಲ್ ಮಾಡುವುದಾಗಿ ಬೆದರಿಸಿದ್ದಾನೆ. ಅಲ್ಲದೇ ವಿದ್ಯಾರ್ಥಿನಿಯ ಅಂಗಾಂಗಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ. ಇದರಿಂದ ಬೇಸತ್ತ ವಿದ್ಯಾರ್ಥಿನಿ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಉಪನ್ಯಾಸಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.



