Kannada NewsKarnataka NewsLatest
*ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಹೊತ್ತಿಕೊಂಡ ಬೆಂಕಿ; ಇಬ್ಬರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸ್ದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಇಲ್ಲಿನ ಕಮಲಾಪುರದ ಮಹಗಾಂವ್ ಕ್ರಾಸ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಇಬ್ಬರು ಸುಟ್ಟು ಕರಕಲಾಗಿದ್ದಾರೆ.
ಬೈಕ್ ನಲ್ಲಿದ್ದ ಆಕಾಶ್ ಧನವಂತ್ (19) ಹಾಗೂ ಸತೀಶ್ ಮೃತರು. ಮೃತರು ಕಮಲಾಪುರದ ಸಿರಗಾಪುರ ನಿವಾಸಿಗಳು. ಮಹಾಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



