*ಕೃಷ್ಣಮೃಗಗಳ ಸಾವು ಪ್ರಕರಣ: ಮೃಗಾಲಯಕ್ಕೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವು ಹಿನ್ನಲೆಯಲ್ಲಿ ಮೃಗಾಲಯಕ್ಕೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
31 ಕೃಷ್ಣಮೃಗಳ ಸಾವುನ್ನಪ್ಪಿರುವ ಹಿನ್ನೆಲೆಯಲ್ಲಿ ರಂಗಸ್ವಾಮಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಭೇಟಿ ನೀಡಿದ್ದಾರೆ. ಪ್ರಾಧಿಕಾರದ ಅಧ್ಯಕ್ಷರಿಗೆ ಸಿಸಿಎಫ್ ಮಂಜುನಾಥ ಚೌವಾಣ, ಎಸಿಎಫ್ ನಾಗರಾಜ್ ಬಾಳೆಹೊಸುರ ಸಾಥ್ ನೀಡಿದರು. ಮೃಗಾಲಯ ಅಧಿಕಾರಿಗಳು, ಸಿಬ್ಬಂದಿಯಿಂದ ತಂಡ ಮಾಹಿತಿ ಪಡೆದಿದೆ. ಉಳಿದ 7 ಕೃಷ್ಣಮೃಗಳ ಉಳಿಸಿಕೊಳ್ಳಲು ಕ್ರಮದ ಬಗ್ಗೆ ಪರಿಶೀಲನೆ ನಡೆಸಿದರು.
ಮೃಗಾಲದಲ್ಲಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 31 ಕೃಷ್ಣ ಮೃಗಗಳ ಸಾವಿನ ಕುರಿತು ಅರಣ್ಯ ಇಲಾಖೆ ಸಚಿವರ ಸೂಚನೆಯಂತೆ ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದೇವೆ. ಮರಣೋತ್ತರ ಪರೀಕ್ಷೆ ಮತ್ತು ಲ್ಯಾಬ್ ನಿಂದ ವರದಿ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು.
ಎಲ್ಲೊ ಒಂದು ಕಡೆ ಲೋಪದೋಷ ಆಗಿರುತ್ತದೆ. ಅದು ತನಿಖೆ ಬಳಿಕವೇ ಗೊತ್ತಾಗಲಿದೆ. ಮೂಕ ಪ್ರಾಣಿಗಳ ಸಾವಿಗೆ ಯಾರೇ ಕಾರಣವಾದ್ರೂ ಅವರ ಮೇಲೆ ಕ್ರಮ ಖಂಡಿತ ಆಗುತ್ತೆ. ಈಗಾಗಲೇ ನುರಿತ ವೈದ್ಯರ ತಂಡ ಭೇಟಿ ನೀಡಿ ಚಿಕಿತ್ಸೆ ಕೊಡುವ ಕೆಲಸ ಮಾಡಿದೆ. ನಾನು ಇಲ್ಲಿ ವೈದ್ಯರ ಕೊರತೆ ಇರುವ ಬಗ್ಗೆ ಮಾಹಿತಿ ತೆಗೆದುಕೊಂಡಿದ್ದೇನೆ. ನಾನು ಸ್ಥಳಕ್ಕೆ ಭೇಟಿ ನೀಡಿದಾಗ ಬ್ಯಾಕ್ಟೀರಿಯಾ ವೈರಸ್ ನಿಂದ ಸಾವು ಆಗಿದೆ ಎಂದು ಇಲ್ಲಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೃಷ್ಣ ಮೃಗಗಳ ಸಾವಿಗೆ ನಿಖರವಾದ ಅಂಶ ಇನ್ನೂ ಗೊತ್ತಗಿಲ್ಲ. ಈಗಾಗಲೇ ಸ್ಯಾಂಪಲ್ಸ್ ಗಳನ್ನ ಲ್ಯಾಬ್ ಗೆ ಕಳುಹಿಸಲಾಗಿದೆ. ನಮಗೆ ಮೇಲ್ನೋಟಕ್ಕೆ ತಪ್ಪಾಗಿದೆ ಅಂತ ಗೊತ್ತಾಗುತ್ತಿದೆ. ಮೃಗಾಲಯದ ಸಿಬ್ಬಂದಿ ಅಧಿಕಾರಿ, ವೈದ್ಯರು, ಯಾರೇ ಇರಲಿ ಕ್ರಮ ಖಂಡಿತ ತಗೆದುಕೊಳುತ್ತೇವೆ ಎಂದರು.


