
ಪ್ರಗತಿವಾಹಿನಿ ಸುದ್ದಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ರಾಷ್ಟ್ರ ರಾಜಧಾನಿಯ ದೆಹಲಿಕೆಂಪುಕೋಟೆಯ ಬಳಿ ಕಾರು ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದರವ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ.
ನವೆಂಬರ್ 10ರಂದು ಸಂಜೆ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ i20 ಕಾರಿನಲ್ಲಿ ಬಂದ ಉಗ್ರರು ಕಾರಿನ ಸಮೇತ ಸ್ಫೋಟಿಸಿದ್ದರು. ದುರಂತದಲ್ಲಿ 13 ಜನರು ಸಾವನ್ನಪ್ಪಿದ್ದರು. ಮೃತದೇಹಗಳು ಛಿದ್ರ ಛಿದ್ರವಾಗಿದ್ದವು. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರು ಸ್ಫೋಟ ಪ್ರಕರಣದ ಮತ್ತೋರ್ವ ಗಾಯಾಳು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಉಳಿದ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.

