
ಪ್ರಗತಿವಾಹಿನಿ ಸುದ್ದಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಖರ್ಗೆ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ, ಬೆಳಗಾವಿ ಅಧಿವೇಶನ, ಪ್ರಧಾನಿ ಮೋದಿ ಭೇಟಿಯಾಗಿ ಚರ್ಚಿಸಿದ ವಿಷಯಗಳು ಸೇರಿದಂತೆ ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತಾಗಿಯು ಚರ್ಚೆ ನಡೆಸಿದರು.




