
ಪ್ರಗತಿವಾಹಿನಿ ಸುದ್ದಿ: ದೆಹಲಿ ಬಾಂಬ್ ಬ್ಲಾಸ್ಟ್ ಬಳಿಕ ಎಲ್ಲ ಕಡೆ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ ಪೊಲೀಸರು ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ರಾಜಧಾನಿ ಬೆಂಗಳೂರಲ್ಲಿ ಯಾವುದೇ ಸೂಕ್ತ ದಾಖಲೆಗಳಿಲ್ಲದೆ ವಾಸ ಮಾಡುತ್ತಿದ್ದ ಒಟ್ಟು 11 ಜನ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಅವರು, ಬಂಧಿತ ವಿದೇಶಿ ಪ್ರಜೆಗಳನ್ನು ಎಫ್‌ಆರ್‌ಆರ್‌ಓ ಮುಂದೆ ಹಾಜರು ಪಡಿಸಲಾಗಿದೆ ಎಂದಿದ್ದಾರೆ.
ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದಾಗ ಹೀಗೆ ಸೂಕ್ತ ದಾಖಲೆಗಳಿಲ್ಲದೆ 11 ಮಂದಿ ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಕಂಡು ಬಂದಿದ್ದು, ಎಲ್ಲರನ್ನೂ ಬಂಧಿಸಲಾಗಿದೆ.
ಇನ್ನು ವಿದೇಶಿಗರಿಗೆ ಮನೆ ನೀಡಿದ್ದ ಶಿವರಾಮಕೃಷ್ಣ (42) ಮತ್ತು ಸಂಗಪ್ಪ ಪಾಟೀಲ (35) ನಿಯಮಗಳನ್ನು ಅವರ ವಿರುದ್ಧ ಕೂಡ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.
ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ನೀಡುವ ವೇಳೆ ಮಾಲೀಕರು ಕಡ್ಡಾಯವಾಗಿ ಕಾನೂನು ನಿಯಮಗಳನ್ನು ಪಾಲಿಬೇಕು. ಆದ್ರೆ ಇಲ್ಲಿ ಆ ನಿಯಮ ಪಾಲನೆಯಾಗಿರಲಿಲ್ಲ. ಬೆಂಗಳೂರಲ್ಲಿ ಈ ರೀತಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳು ಡ್ರಗ್ಸ್ ಮಾರಾಟ ಜಾಲದಲ್ಲಿ ತೊಡಗಿದ್ದರು ಎನ್ನಲಾಗಿದೆ.




