
ಪ್ರಗತಿವಾಹಿನಿ ಸುದ್ದಿ: ರಾಜ್ಯದ 33 ಜನ ಮಾಲಾಧಾರಿಗಳು ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೆ ದೊಡ್ಡ ಅನಾಹುತ ತಪ್ಪಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ತೆರಳುತ್ತಿದ್ದ ವಾಹನ ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಅಪಘಾತ ಸಂಭವಿಸಿದೆ
ಯಾಲದಹಳ್ಳಿಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಕೇರಳದ ಏರಿಮಲೈ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತವಿಲ್ಲದೇ ಬಸ್‌ನಲ್ಲಿದ್ದವರು ಪಾರಾಗಿದ್ದಾರೆ.
ಕೆಲ ಮಾಲಾಧಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.



