CrimeKannada NewsKarnataka NewsNationalPolitics

*ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ:  ಸುಳ್ಳು ಮಾಹಿತಿ ಪ್ರಕಟಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು*

ಪ್ರಗತಿವಾಹಿನಿ ಸುದ್ದಿ:, ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ   ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ. 

ಅದರಂತೆ ಆಯೋಗದಿಂದ ಉಚ್ಚ ನ್ಯಾಯಾಲಯಕ್ಕೆ  ಅಫಿಡೆವಿಟ್ ನ್ನು (Affidavit) ಅ ಸಲ್ಲಿಸಲಾಗಿರುತ್ತದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ.

2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು WhatsApp ನಲ್ಲಿ  ಹಂಚಿಕೆ (share) ಮಾಡಿರುವ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. 

ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಸಾಮಾಜಿಕ ಜಾಲತಾಣಗಳಾದ WhatsApp, Facebook, Twitter, Instagram ಇತ್ಯಾದಿಗಳಲ್ಲಿ ಹಂಚಿಕೊಂಡಲ್ಲಿ ಇದಕ್ಕೆ ಕಾರಣರಾಗಿರುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. 

Home add -Advt

ಆದ್ದರಿಂದ ಈ ರೀತಿ ಯಾವುದೇ ಸುಳ್ಳು/ತಪ್ಪು ಮಾಹಿತಿಯನ್ನು ಸೃಜಿಸಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸದಂತೆ ಹಾಗೂ ಬಂದಿರುವ ಮಾಹಿತಿಯನ್ನು forward ಮಾಡದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ  ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button