Kannada NewsKarnataka NewsLatest
*BREAKING:ಲಾಡ್ಜ್ ರೂಂ ನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ *

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ಲಾಡ್ಜ್ ರೋಂ ನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ನಗರದ ಅಶೋಕ್ ಗ್ರ್ಯಾಂಡ್ ಹೋಟೆಲ್ ರೂಂ ನಲ್ಲಿ ಈ ಘಟನೆ ನಡೆದಿದೆ. ಗೀತಾ(47) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ತಕ್ಷಣ ರೂಮ್ ನಲ್ಲಿದ್ದ ಪ್ರಿಯಕರ ಬೆಂಕಿ ನಂದಿಸಿ ಮಹಿಳೆಯನ್ನು ರಕ್ಷಿಸಿದ್ದಾನೆ.
ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.



