*ಐಐಟಿಗೆ ಭೇಟಿ ನೀಡಿದ ಬೆಳಗಾವಿಯ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು*

ಸೂಪರ್ 50 ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರವಾಸದ ಭಾಗ್ಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಎರಡು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಧಾರವಾಡದ ಐಐಟಿ ಕಾಲೇಜಿಗೆ ಭೇಟಿ ನೀಡಿ ಅಧ್ಯಯನ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಜಲಟ್ಟಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆನಂದ ಕೋಳಿ ಅವರು, ಬೈಲಹೊಂಗಲದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ 50 ವಿದ್ಯಾರ್ಥಿಗಳು ಹಾಗೂ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ 59 ವಿದ್ಯಾರ್ಥಿಗಳು ಧಾರವಾಡದ ಐಐಟಿ ಕಾಲೇಜಿಗೆ ಭೇಟಿ ನೀಡುವ ನಿಟ್ಟಿನಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ವ್ಯವಸ್ಥೆ ಮಾಡಿದರು.
ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಎರಡು ಕಾಲೇಜಿಗೆ ಸೂಪರ್ 50 ಎಂಬ ವಿನೂತನ ಕಾರ್ಯಕ್ರಮದ ಮೂಲಕ ಆಯ್ಕೆ ಮಾಡಲಾದ ಎಲ್ಲ ವಿದ್ಯಾರ್ಥಿಗಳಿಗೆ ಐಐಟಿ ಪ್ರವೇಶ ಪಡೆಯಬೇಕೆಂಬ ಉದ್ದೇಶದಿಂದ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿ ಐಐಟಿಯಲ್ಲಿನ ಪ್ರಯೋಗಾಲಯ, ಗ್ರಂಥಾಲಯ, ಕ್ರೀಡಾಂಗಣ, ಕಾಲೇಜಿನ ವಾತಾವರಣ ಬಗ್ಗೆ ಮಾಹಿತಿ ನೀಡಲಾಗಿದೆ. ಜತೆಗೆ ಐಐಟಿ ಕಾಲೇಜಿನ ಪ್ರಾಧ್ಯಾಪಕ ಡಾ.ಕೀರ್ತಿಕುಮಾರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಈ ಎಲ್ಲ ವಿದ್ಯಾರ್ಥಿಗಳಿಗೆ ಐಐಟಿ ಪ್ರವೇಶದ ಕುರಿತು ವಿಶೇಷ ತರಗತಿ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದರು.
ಈ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳಗಾವಿ ಉಪನಿರ್ದೇಶಕರಾದ ಹರ್ಷ, ತಾಲೂಕ ಬಿಸಿಎಂ ಅಧಿಕಾರಿ ರಾಜು ಚಿನಗುಡಿ, ಪ್ರಾಚಾರ್ಯರು ಎನ್ ಎಂ ಕುದರೆಮೋತಿ, ಉಪನ್ಯಾಸಕರು ಬಿ ಎಂ ಕೊಳವಿ,ಐಐಟಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ನಾಗರಾಜ ನಾಯ್ಕರ್ ಉಪನ್ಯಾಸಕ ಟಿ.ಎಂ.ಮಕಾಂದಾರ ಮತ್ತಿತರರು ಉಪಸ್ಥಿತರಿದ್ದರು.



