
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಬಲಿಯಾಗುತ್ತಿರುವವರ ಪ್ರಕರಣ ದಿನ ದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಸ್ತೆ ಬದಿ ನಡೆದು ಹೋಗುತ್ತಿದ್ದ 70 ವರ್ಷದ ವೃದ್ಧನ ಮೇಲೆ ಬಿಎಂಟಿಸಿ ಬಸ್ ಹರಿದಿದ್ದು, ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿವಾಳ ಬಸ್ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.



