
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ಈ ನಡುವೆ ದರೋಡೆ ಕೋರರ ಕಾರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ. ದರೋಡೆ ಕೋರರು ಕಾರನ್ನು ಬಿಟ್ಟು ಎಸ್ಕೇಪ್ ಆಗಿದ್ದಾರೆ.
ಆಂಧ್ರಪೊಲೀಸರೊಂದಿಗೆ ಸಂಪರ್ಕದಲ್ಲಿರುವ ಬೆಂಗಳೂರು ಪೊಲೀಸರು ಸಸ್ಯ ಕಾರನ್ನು ವಶಕ್ಕೆ ಪಡೆದಿದ್ದಾರೆ. ದರೋಡೆಕೋರರಿಗಾಗಿ ಶೋಧಕಾರ್ಯ ಮುಂದುವರೆಸಲಾಗಿದೆ.



