Kannada NewsKarnataka NewsLatest
*BREAKING: ಧರ್ಮಸ್ಥಳ ಬುರುಡೆ ಪ್ರಕರಣ: SIT ಅಧಿಕಾರಿಗಳಿಂದ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿವಿಧೆಡೆಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟುರುವುದಾಗಿ ಹೇಳಿದ್ದ ಬುರುಡೆ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿಸಿರುವ ಎಸ್ ಐಟಿ ಅಧಿಕಾರಿಗಳು ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯಕ್ಕೆ ಆಗಮಿಸಿದ ಎಸ್ ಐಟಿ ಅಧಿಕಾರಿಗಳು 3923 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ಹಾಗೂ ಸುಳ್ಲು ಸಾಕ್ಷ್ಯಗಳ ಕುರುತು ವರದಿ ಸಲ್ಲಿಸಿದ್ದಾರೆ.
ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್, ಸುಜಾತಾ ಭಟ್ ಸೇರಿದಂತೆ 6 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.



