Kannada NewsKarnataka NewsPolitics

*ಧರ್ಮಸ್ಥಳ ಕೇಸ್ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ: ಗೃಹ ಸಚಿವ ಪರಮೇಶ್ವ‌ರ್*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣ ಸಂಬಂಧ ಸರ್ಕಾರಕ್ಕೂ ವಿಶೇಷ ತನಿಖಾ ತಂಡ (ಎಸ್‌ಐಟಿ) ವರದಿ ನೀಡಲಿದೆ. ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳನ್ನು ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವ‌ರ್ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಡಾ.ಜಿ ಪರಮೇಶ್ವರ್ ಅವರು, ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗಲಿದೆ’ ಎಂದರು.

Home add -Advt

ಸರ್ಕಾರವೇ ಎಸ್‌ಐಟಿ ರಚಿಸಿರುವುದಲ್ಲವೇ? ಹೀಗಾಗಿ ಸರ್ಕಾರಕ್ಕೂ ಅವರು ವರದಿ ಕೊಡುತ್ತಾರೆ. ವರದಿ ಬಂದ ಬಳಿಕ ಈ ಪ್ರಕರಣದಲ್ಲಿ ಏನು ಷಡ್ಯಂತ್ರ ನಡೆದಿದೆ, ಯಾರೆಲ್ಲಾ ಕಾರಣ ಎಂಬುದು ಗೊತ್ತಾಗಲಿದೆ’ ಎಂದರು.

Related Articles

Back to top button