*BREAIKN: ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಸಿದ್ದರಾಮಯ್ಯ ಖಡಕ್ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಚರ್ಚೆ ನಡುವೆಯೇ ಕೆಲ ಸಚಿವರು, ಶಾಸಕರು ದೆಹಲಿಗೆ ತೆರಳಿದ್ದಾರೆ. ಮತ್ತೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬೆಂಗಳೂರು ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ಈ ನಡುವೆ ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಖಡಕ್ ಹೇಳಿಕೆ ನೀಡಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಬಜೆಟ್ ನ್ನು ಕೂಡ ನಾನೇ ಮಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನವರು ಯಾರಾದರೂ ಹೇಳಿದ್ದಾರಾ? ನಮ್ಮ ಬಳಿಯೂ ಏನೂ ಹೇಳಿಲ್ಲ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ನಾಯಕರು ಏನು ನಿರ್ಧಾರ ಮಾಡುತ್ತಾರೋ ಅದಕ್ಕೆ ನಾನು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲರೂ ಬದ್ಧರಾಗುರುತ್ತೇವೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಅವರನ್ನು ಭೇಟಿಯಾಗುತ್ತೇನೆ ಎಂದರು.



