
ಪ್ರಗತಿವಾಹಿನಿ ಸುದ್ದಿ: ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ತಂದೆ ಹಾಗೂ ಇಬ್ಬರು ಮಕ್ಕಳ ಜೊತೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ದುಡುಕಿನ ನಿರ್ಧಾರ ಕೈಗೊಂಡಿರುವ ಶಂಕೆ ವ್ಯಕ್ತವಾಗಿದೆ.
ತಂದೆ ವಿಠಲರಾವ್(85) ಪುತ್ರ ನಾರಾಯಣ ಶಿಂಧೆ (42) ಮಕ್ಕಳಾದ ಶಿವರಾಜ್ (12) ಹಾಗೂ ಶ್ರೀದೇವಿ (10 ಆತ್ಮಹತ್ಯೆಗೆ ಶರಣಾದವರು. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


