Film & EntertainmentKannada NewsKarnataka News

*ರಕ್ಷಿತಾ ಶೆಟ್ಟಿಗೆ ಮಾನಹಾನಿ ಆರೋಪ: ನಟ ಕಿಚ್ಚ ಸುದೀಪ್ ಹಾಗೂ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ ಅವಮಾನಕಾರಿ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ಪವಿತ್ರ ಅವರು ರಾಮನಗರದ ಡಿವೈಎಸ್‌ಪಿ ಕಚೇರಿಯಲ್ಲಿ ದೂರು ಸಲ್ಲಿಸಿದ್ದಾರೆ.

ನಟ ಕಿಚ್ಚ ಸುದೀಪ್ ಹಾಗೂ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ ಅವಮಾನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ.

ದೂರಿನಲ್ಲಿ, ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ರಕ್ಷಿತಾ ಶೆಟ್ಟಿ ವಿರುದ್ಧ ಮಾನಹಾನಿಕರ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಕಾರ್ಯಕ್ರಮದ ನಿರೂಪಕರಾದ ಕಿಚ್ಚ ಸುದೀಪ್ ರಕ್ಷಿತಾಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ಘಟನೆಗಳನ್ನು ಖಾಸಗಿ ವಾಹಿನಿಯು ಪ್ರಸಾರ ಮಾಡಿ ರಕ್ಷಿತಾ ಶೆಟ್ಟಿಯ ಮಾನಹಾನಿಗೆ ಕಾರಣವಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇದಲ್ಲದೆ, ಮತ್ತೊಬ್ಬ ಸ್ಪರ್ಧಿ ರಿಷಾ ಸಹಸ್ಪರ್ಧಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ಮಾಡಲಾಗಿದೆ. ಈ ಘಟನೆಗಳ ಬಗ್ಗೆ ಕಾರ್ಯಕ್ರಮದ ಮುಖ್ಯಸ್ಥರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಧ್ಯಾ ಪವಿತ್ರ ಆರೋಪಿಸಿದ್ದಾರೆ. ಆದ್ದರಿಂದ, ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

Home add -Advt

Related Articles

Back to top button