Latest

*ಸಿಎಂ ಸಿದ್ದರಾಮಯ್ಯ ಭೇಟಿಗೆ ಸಮಯ ನೀಡಿದ ಎಐಸಿಸಿ ಅಧ್ಯಕ್ಷ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಒಂದೆಡೆ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಜೋರಾಗಿದ್ದರೆ ಮತ್ತೊಂದೆಡೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಸಚಿವರು, ಶಾಸಕರು ಖರ್ಗೆ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಈ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿಗೆ ಮಲ್ಲಿಕಾರ್ಜುನ ಖರ್ಗೆ ಸಮಯ ನೀಡಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೆ ಸಮಯ ನಿಗದಿಯಾಗಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸದಲ್ಲಿಯೇ ಭೇಟಿಯಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಈ ಮೊದಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರಿಗೂ ಖರ್ಗೆ ಬುಲಾವ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಭೇಟಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಸಿಎಂ ಸಿದ್ದರಾಮಯ್ಯ ಭೇಟಿಗೆ ಮಾತ್ರ ಸಮಯ ನಿಗದಿಯಾಗಿದೆ ಎಂದು ತಿಳಿದುಬಂದಿದೆ.

Home add -Advt


Related Articles

Back to top button