
ಪ್ರಗತಿವಾಹಿನಿ ಸುದ್ದಿ: ಎರಡು ಬೈಕ್ ಗಳ ನಡುವೆ ಸಂಭವಿಸಿಇದ ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಜಾಂಬೋಳ್-ಬೆನಕನಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಮಲ್ಲಿಕಾರ್ಜುನ (35) ಮಗಳು ಮಹಾಲಕ್ಷ್ಮೀ (5), ಪವನ್ (28) ಮೃತ ದುರ್ದೈವಿಗಳು.
ಮಲ್ಲಿಕಾರ್ಜುನ್ ಅವರು ಪತ್ನಿ, ಮಗಳೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮತ್ತೊಂದು ಬೈಕ್ ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ದುರಂತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


