Kannada NewsKarnataka NewsLatest
*BREAKING: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದೆ.
ಕೋಲಾರದ ಅಬ್ಬೇನಹಳ್ಳಿಯಲ್ಲಿ ಇಂದು ಬೆಳಿಗ್ಗೆ ಕಾಡು ಡಿವೈಡರ್ ಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಚೆನ್ನೈ ಮೂಲದ ಗೋಪಿ (38), ಗೌತಮ್ ರಮೇಶ್(28), ಹರಿಹರನ್ (27) ಹಾಗೂ ಜಯಂತ್ (30) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


