Kannada NewsKarnataka NewsLatest

*BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಆರೋಪಿ ಚಿನ್ನಯ್ಯಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿಯೇ ತೀವ್ರ ಚರ್ಚೆಗೆ ಕಾರಣವಾಗಿದ್ದ ಧರ್ಮಸ್ಥಳದ ಬಂಗ್ಲಗುಡ್ಡ ಹಾಗೂ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಧರ್ಮಸ್ಥಳ ಪ್ರಕರಣ ಪ್ರಮುಖ ಆರೋಪಿ ಬುರುಡೆ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಹಾಗೂ 12 ಷರತ್ತುಗಳನ್ನು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Home add -Advt

ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಆರೋಪಿ ಚಿನ್ನಯ್ಯ ನಾಳೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.


Related Articles

Back to top button