Kannada NewsKarnataka NewsLatestPolitics

*ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಶಿಡ್ಲಘಟ್ಟದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಶಾಸಕರನ್ನು ಕಾಂಗ್ರೆಸ್ ಪಕ್ಷದ ನಾಯಕರೇ ಖರೀದಿ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರು ಎಷ್ಟು ಹಣ ಆಮೀಷ ಒಡ್ಡಿದ್ದರು ಎಂದು ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ದಾಖಲೆಗಳಲ್ಲಿ ಸೇರಿವೆ. ಈಗ ಬಿಜೆಪಿಯವರು ತಮ್ಮ ಪ್ರವೃತ್ತಿಯನ್ನು ನೆನೆಸಿಕೊಳ್ಳುತ್ತಿದ್ದಾರೆ” ಎಂದು ಹರಿಹಾಯ್ದರು.

ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ” ಎಂದು ತಿಳಿಸಿದರು.

BJP is the founding father of horse trading of MLAs; it is their culture: DCM DK Shivakumar

Home add -Advt

Shidlaghatta/Bengaluru, Nov 24: Dubbing BJP as the founding father of horse trading of MLAs, Deputy Chief Minister DK Shivakumar today said purchasing MLAs was the culture of BJP.

Speaking to reporters at Shidlaghatta and his Sadashivanagar residence, he said, “BJP is very conversant with horse trading of MLAs. Janata Dal was the victim of it and now they are caught in this. When the BJP government was formed in the past, how many thousands of crores did they spend? Had they not fixed rates for different posts like a hotel menu?”

“Their own party leaders have spoken out in public about the amount of money that is needed to be paid for CM’s post and minister’s post. This issue has been discussed in the Assembly and is part of the records. The BJP is remembering their past practices,” he added.

Related Articles

Back to top button